ನವದೆಹಲಿ: ಮಹಾಮಾರಿ ಕೊರೊನಾ ದೇಶದಲ್ಲಿ ದಿನದಿಂದ ದಿನಕ್ಕೆರ ಹೆಚ್ಚಾಗುತ್ತಲೇ ಇದ್ದು, ಇಂದು 9,304 ಪ್ರಕರಣಗಳು ಪತ್ತೆಯಾಗಿವೆ. ಸೋಂನಿಂದ ಒಂದೇ ದಿನ 260 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,16,919 ಏರಿಕೆಯಾಗಿದೆ.
ಇದರಲ್ಲಿ 1,06,737 ಸಕ್ರಿಯ ಪ್ರಕರಣಗಳಿದ್ದು 1,04,107 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 6,075 ಮಂದಿ ಈವರೆಗೆ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.