ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ರಾಜ್ಯದಲ್ಲಿ ಮಹಾರಾಷ್ಟ್ರದಿಂದ ಬಂದವರಿಂದಲೇ ಹೆಚ್ಚು ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯಕ್ಕೆ ಮಹಾರಾಷ್ಟ್ರ ಸೋಂಕು ಕಂಟಕವಾಗಿ ಪರಿಣಮಿಸಿದೆ.
ಇಂದು ಬರೊಬ್ಬರಿ 116 ಕೊರೊನಾ ಕೇಸ್ ಗಳು ಪತ್ತೆಯಾಗಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದ್ದು, ಒಟ್ಟು ಸೋಂಕಿತರ 1,578ಕ್ಕೆ ಏರಿಕೆಯಾಗಿದೆ. ಈವರೆಗೆ 570 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನು 966 ಸಕ್ರಿಯ ಪ್ರಕಣಗಳಿವೆ. 41 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು ಪತ್ತೆಯಾದ 116 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ ಜಿಲ್ಲೆಗೆ ಅಧಿಕ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಇನ್ನು ಬೆಂಗಳೂರು 06, ಹಾಸನ 13, ಬಳ್ಳಾರಿ 11, ಶಿವಮೊಗ್ಗ 06 ಉತ್ತರ ಕನ್ನಡ 09 ದಕ್ಷಿಣ ಕನ್ನಡ 06, ಮಂಡ್ಯ-15 ಗದಗ-02 ಚಿಕ್ಕಮಗಳೂರು-02 ಧಾರವಾಡ-05, ಬೆಳಗಾವಿ-05,ಮೈಸೂರು-1 ಬಿಜಾಪುರ-1 ಪ್ರಕರಣ ಪತ್ತೆಯಾಗಿವೆ.
Mid day Bulletin 21/05/2020.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @KarnatakaVarthe @PIBBengaluru @KarFireDept pic.twitter.com/K5tQRIkkog
— Karnataka Health Department (@DHFWKA) May 21, 2020



