Connect with us

Dvgsuddi Kannada | online news portal | Kannada news online

‘ಮಹಾ’ ಕೊರೊನಾ ಅಟ್ಟಹಾಸಕ್ಕೆ ತತ್ತರಿಸಿದ ಕರುನಾಡು; ಇಂದು 116 ಪಾಸಿಟಿವ್, ಸೋಂಕಿತರ ಸಂಖ್ಯೆ 1,578

ಪ್ರಮುಖ ಸುದ್ದಿ

‘ಮಹಾ’ ಕೊರೊನಾ ಅಟ್ಟಹಾಸಕ್ಕೆ ತತ್ತರಿಸಿದ ಕರುನಾಡು; ಇಂದು 116 ಪಾಸಿಟಿವ್, ಸೋಂಕಿತರ ಸಂಖ್ಯೆ 1,578

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ರಾಜ್ಯದಲ್ಲಿ ಮಹಾರಾಷ್ಟ್ರದಿಂದ ಬಂದವರಿಂದಲೇ ಹೆಚ್ಚು ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯಕ್ಕೆ ಮಹಾರಾಷ್ಟ್ರ ಸೋಂಕು ಕಂಟಕವಾಗಿ ಪರಿಣಮಿಸಿದೆ.

ಇಂದು ಬರೊಬ್ಬರಿ 116 ಕೊರೊನಾ ಕೇಸ್ ಗಳು ಪತ್ತೆಯಾಗಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದ್ದು, ಒಟ್ಟು ಸೋಂಕಿತರ 1,578ಕ್ಕೆ ಏರಿಕೆಯಾಗಿದೆ. ಈವರೆಗೆ 570 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನು 966 ಸಕ್ರಿಯ ಪ್ರಕಣಗಳಿವೆ.  41 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಂದು ಪತ್ತೆಯಾದ 116 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ ಜಿಲ್ಲೆಗೆ ಅಧಿಕ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಇನ್ನು ಬೆಂಗಳೂರು 06, ಹಾಸನ 13, ಬಳ್ಳಾರಿ 11, ಶಿವಮೊಗ್ಗ 06 ಉತ್ತರ ಕನ್ನಡ 09 ದಕ್ಷಿಣ ಕನ್ನಡ 06, ಮಂಡ್ಯ-15 ಗದಗ-02 ಚಿಕ್ಕಮಗಳೂರು-02 ಧಾರವಾಡ-05, ಬೆಳಗಾವಿ-05,ಮೈಸೂರು-1 ಬಿಜಾಪುರ-1 ಪ್ರಕರಣ ಪತ್ತೆಯಾಗಿವೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top