ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳು ಒಂದು ಇಲ್ಲದ ಗ್ರೀನ್ ಝೋನ್ ಗಳಲ್ಲಿ ಅಂಗಡಿ ಮುಗ್ಗಟು ತೆರೆಯಲು ಷರತ್ತು ಬದ್ಧ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ರಾಜ್ಯದ ಗ್ರೀನ್ ವಲಯದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಯನ್ನು ಪ್ರಾರಂಭಿಸಲು ಅವಕಾಶ ಸಿಕ್ಕಂತಾಗಿದೆ.
ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ ಮತ್ತು ಕೊಡಗು ಜಿಲ್ಲೆಗಳು ಹಸಿರು ವಲಯದ ವ್ಯಾಪ್ತಿಗೆ ಬರಲಿದೆ. ಈ ಜಿಲ್ಲೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಅಂಗಡಿ ಮುಗ್ಗಟುಗಳ ಜೊತೆಗೆ ಕೈಗಾರಿಕೆ ಪುನಾರಂಭ ಮಾಡಲು ಅವಕಾಶ ನೀಡಲಾಗಿದೆ.