ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ನಿರಾಶ್ರಿತರು, ಬಡವರು, ಕೂಲಿ ಕಾರ್ಮಿಕರ ಕುಟುಂಬಗಳಿಗೆ ಪ್ರತಿ ದಿನ ಒಂದು ಲೀಟರ್ ಹಾಲು ವಿತರಣೆಯನ್ನು ಏ.30 ರವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇ 3 ರವರೆಗೆ ಲಾಕ್‌ಡೌನ್ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ವಿವಿಧ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ವಿಲೇವಾರಿ ಮಾಡುವುದು ಕಷ್ಟವಾಗಿರುವುದರಿಂದ ಉಚಿತ ಹಾಲಿನ ವಿಸ್ತರಣೆ ಮುಂದುವರಿಸಲಾಗುವುದು ಎಂದು ತಿಳಿಸಿದದರು.
ರಾಜ್ಯದಲ್ಲಿ 14 ಹಾಲು ಒಕ್ಕೂಟಗಳಿದ್ದು, ಪ್ರತಿ ದಿನದ 7.75 ಲಕ್ಷ ಲೀಟರ್ ಹಾಲು ಅಧಿಕವಾಗಿ ಸಂಗ್ರಹವಾಗುತ್ತಿದೆ. ಈ ಹಾಲನ್ನು ಬಡವರು, ಕೂಲಿ ಕಾರ್ಮಿಕರಿಗೆ ವಿತರಿಸಲಾಗುತ್ತಿದೆ.
ರಾಜ್ಯ ಸರ್ಕಾರವೇ ಪ್ರತಿ ದಿನ ಸರಾಸರಿ7.75 ಲಕ್ಷ ಲೀಟರ್ ಹಾಲನ್ನು 37 ರಂತೆ ಖರೀದಿಸಿ ವಿತರಿಸಲಿದೆ. ಇದಕ್ಕಾಗಿ 25.81 ಕೋಟಿ ಅನುದಾನ ಮೀಸಲಿಡಲಾಗಿದೆ. .



