ಡಿವಿಜಿಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ.
ಕಲಬುರಗಿ 6, ಗದಗ 1, ಬೆಂಗಳೂರು (ಪಾದರಾಯನಪುರ)1 ಮತ್ತು ಬಾಗಲಕೋಟೆಯ 3ರಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೂ 523 ಮಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಪೈಕಿ 20 ಮಂದಿ ಮೃತಪಟ್ಟಿದ್ದಾರೆ. 07 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.



