Connect with us

Dvgsuddi Kannada | online news portal | Kannada news online

ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿದ್ದರಾಮಯ್ಯ

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಲಾಕ್‌ಡೌನ್‌ ಘೋಷಣೆ ನಂತರ ಕೆಲಸ,ವೇತನವಿಲ್ಲದೆ ಸಂಕಷ್ಟದಲ್ಲಿರುವ  2 ಲಕ್ಷಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಸರ್ಕಾರಿ ಶಾಲಾ– ಕಾಲೇಜುಗಳಲ್ಲಿ ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕ‌ ರಜಾ ದಿನಗಳನ್ನು ಕೋವಿಡ್‌ 19 ಲಾಕ್ ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಗೌರವಧನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ಇದೇ ಮಾರ್ಚ್‌ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕು. ವಸತಿ ಶಾಲೆಗಳಲ್ಲಿ ಆರರಿಂದ 12ನೇ ತರಗತಿವರೆಗೆ ಮಕ್ಕಳ ಪ್ರವೇಶಕ್ಕೆ ನಿಗದಿಪಡಿಸಿದ ಪೋಷಕರ ಆದಾಯ ಮಿತಿ ಹೆಚ್ಚಿಸಬೇಕು. ಖಾಸಗಿ ಶಾಲೆಗಳಿಗೆ ಆರ್‌ಟಿಇ ಅಡಿ ಬಾಕಿ ಉಳಿಸಿಕೊಂಡಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top