ಡಿವಿಜಿ ಸುದ್ದಿ, ಬೆಂಗಳೂರು: ಉಡುಪಿ ಜಿಲ್ಲೆಯಲ್ಲೆಯೊಂದರಲ್ಲಿಯೇ ಇಂದು ಬರೋಬ್ಬರಿ 210 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ ಎಂದು ಸಚಿವ ಆರ್. ಅಶೋಕ್ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಗೆ ಮಹಾರಾಷ್ಟ್ರದಿಂದ ಬಂದವರಿಂದ ಕಂಟಕ ಶುರುವಾಗಿದ್ದು, ಇಂದು ಒಂದೇ ದಿನ 210 ಕೇಸ್ ಗಳು ಬಂದಿವೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ತಗೆದುಕೊಂಡಿದ್ದು, ಮಹಾರಾಷ್ಟ್ರದಿಂದ ಬಂದವರಿಗೆ ಪ್ರತ್ಯೇಕ ಕ್ವಾರೆಂಟೈನ್ ಕೇಂದ್ರ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಚರ್ಚಿಸಿ ಕೂಡಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



