ಡಿವಿಜಿ ಸುದ್ದಿ, ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ವಡೇರಹಳ್ಳಿಯಲ್ಲಿ 4 ಎಕರೆಯಲ್ಲಿ ಬೆಳೆದಿದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ನೇತೃತ್ವದಲ್ಲಿ ದಾಳಿ ನಡೆದಿದ್ದು, ಖಚಿತ ಮಾಹಿತಿಯ ಮೇರೆಗೆ ಒಂದು ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ರುದ್ರೇಶ್, ಕೂಡ್ಲಗಿ ತಾಲ್ಲೂಕಿನ ಸುಮಂತ್, ಮೊಳಕಾಲ್ಲೂರು ತಾಲ್ಲೂಕಿನ ರಾಂಪುರದ ಮಂಜುನಾಥ್ ಹಾಗೂ ಜಂಬುನಾಥ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಂಪುರದ ಮಂಜುನಾಥ್ ಎಂಬವರಿಗೆ ಸೇರಿದ ಜಮೀನನ್ನು ರುದ್ರೇಶ್ ಎಂಬಾತ ಗುತ್ತಿಗೆ ಪಡೆದಿದ್ದರು. ಐದು ಎಕರೆ ಭೂಮಿಗೆ ವರ್ಷಕ್ಕೆ ಒಂದು ಲಕ್ಷ ನೀಡುತ್ತಿದ್ದ. ಇದರಲ್ಲಿ ನಾಲ್ಕು ಎಕರೆ ಪದೇಶದಲ್ಲಿ ಗಾಂಜಾ ಬೆಳೆಯಲಾಗಿತ್ತು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



