ಡಿವಿಜಿ ಸುದ್ದಿ, ಧಾರವಾಡ: ಕೆಲಸ ಕಳೆದುಕೊಳ್ಳುವ ಭಯದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕವಳಿಕಾಯಿ ಚಾಳದಲ್ಲಿ ನಡೆದಿದೆ.
ಮೌನೇಶ ಪತ್ತಾರ (36) ಪತ್ನಿ, ಮಗಳಿಗೆ ವಿಷ ನೀಡಿ, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೌನೇಶ ಟಾಟಾ ಮಾರ್ಕೊಪೋಲೊ ಕಂಪನಿ ಉದ್ಯೋದಲ್ಲಿದ್ದರು. ಕಂಪನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ ಎಂದು ಹೇಳಲಾಗುತ್ತಿದೆ.
ಮೂಲತಃ ಗದಗ ಜಿಲ್ಲೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮದವರಾಗಿದ್ದು, ಧಾರವಾಡದಲ್ಲಿ ಉದ್ಯೋಗಕ್ಕಾಗಿ ಬಂದು ನೆಲೆಸಿದ್ದರು. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.