ಡಿವಿಜಿ ಸುದ್ದಿ, ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜು. 16 ರಿಂದ ಒಂದು ವಾರಗಳ ಕಾಲ ಜಿಲ್ಲೆಯನ್ನು ಲಾಕ್‌ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮತ್ತೆ ಲಾಕ್ ಡೌನ್ ಮಾಡುವಂತೆ ಜನರು ಮತ್ತು ಜನ ಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದು, 16 ರಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೊಳಿಸಲಾಗುವುದು. ಈ ಹಿನ್ನಲೆಯಲ್ಲಿ ಇನ್ನು ಎರಡು ದಿನಗಳ ಕಾಲಾವಕಾಶ ಇರುವುದರಿಂದ ವಾರಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿ ಹಾಗೂ ಮೂಲಭೂತ ಅವಶ್ಯಕತೆಗಳನ್ನು ಖರೀದಿ ಮಾಡಿಟ್ಟುಕೊಳ್ಳಿ ಎಂದು ತಿಳಿಸಿದರು.
ಜಿಲ್ಲಾಡಳಿತ ನಿರ್ಧರಿತ ಲಾಕ್ ಡೌನ್ ನ ಕುರಿತ ಮಾರ್ಗಸೂಚಿ ಮತ್ತು ನಿಯಮಗಳನ್ನು ಜಿಲ್ಲಾಧಿಕಾರಿಗಳು ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು.



