ಡಿವಿಜಿ ಸುದ್ದಿ, ದಾವಣಗೆರೆ: ಉಚ್ಚ ನ್ಯಾಯಾಲಯ, ಸಾರಿಗೆ ಆಯುಕ್ತರ ಆದೇಶದ ಮೇರೆಗೆ ವಾಹನಗಳ ನಂಬರ್ ಪ್ಲೇಟ್ ಮೇಲೆ ಸರ್ಕಾರಿ ಇಲಾಖೆ, ಸಂಘ ಸಂಸ್ಥೆಗಳ ಹೆಸರು, ಚಿಹ್ನೆ, ಲಾಂಛನ ತೆರವುಗೊಳಿಸಲು ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ದಾವಣಗೆರೆ ಆರ್ ಟಿ ಒ ಅಧಿಕಾರಿ ಎನ್ .ಜೆ ಬಣಕಾರ್ ತಿಳಿಸಿದ್ದಾರೆ.
ಕೇಂದ್ರ ಮೋಟಾರು ವಾಹನಗಳ ಪ್ರಕಾರ ಡಿ.28 ರೊಳಗಾಗಿ ತೆರವುಗೊಳಿಸುವಂತೆ ಆದೇಶಿಸಿಸಲಾಗಿದೆ. ವಾಹನಗಳ ಮಾಲೀಕರು ಹಾಗೂ ಚಾಲಕರು, ಸಂಘ ಸಂಸ್ಥೆಗಳು ಅನಧಿಕೃತವಾಗಿ ಅಳವಡಿಸಿಕೊಂಡಿರುವಂತಹ ನೊಂದಣಿ ಫಲಕಗಳನ್ನು ಈ ಕೂಡಲೇ ತೆರವುಗೊಳಿಸುವಂತೆ ಸೂಚಿಸಲಾಗಿದೆ.
ದಾವಣಗೆರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಮೋಟಾರು ವಾಹನಗಳ ನಿರೀಕ್ಷಕರು, ಅನಧಿಕೃತವಾಗಿ ಅಳವಡಿಸಿಕೊಂಡಿರುವಂತಹ ನೋಂದಣಿ ಫಲಕಗಳನ್ನು ತರವುಗೊಳಿಸಲು ದಾವಣಗೆರೆ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ನಿಮಯ ಮೀರಿದ ತಪಿತಸ್ಥ ವಾಹನಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ದಾವಣಗೆರೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್.ಜೆ. ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.