ಡಿವಿಜಿ ಸುದ್ದಿ.ಕಾಂ, ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ, ನಾವಿನ್ಯತೆ, ತಾರ್ಕಿಕ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.. ಪ್ರತಿ ಕ್ಷೇತ್ರಕ್ಕೆ ಇಬ್ಬರಂತೆ ಒಟ್ಟು 08 ಮಕ್ಕಳಿಗೆ ರೂ.10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅವರು ಸಾಧನೆ ಬಗ್ಗೆ ವೃತ್ತ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿರಬೇಕು. ಇಲ್ಲವೇ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪ್ರಮಾಣೀಕರಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಜಿಲ್ಲಾಮಟ್ಟದಲ್ಲಿ ರಚಿಸಲ್ಪಟ್ಟಿರುವ ಸಮಿತಿಯು ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳನ್ನು ಆಯ್ಕೆ ಮಾಡಿ ಪ್ರಶಸ್ತಿಗೆ ಶಿಫಾರಸ್ಸು ಮಾಡುತ್ತದೆ. ಆಯ್ಕೆ ಆದ ಮಕ್ಕಳಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಚೇರಿ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, ಎಂ.ಸಿ.ಸಿ. ‘ಬಿ’ ಬ್ಲಾಕ್, ಕುವೆಂಪು ನಗರ, ಹೆಚ್ಚಿನ ಮಾಹಿತಿಗೆ: 08192-264056 ಸಂಪರ್ಕಿಸಿ.