ಡಿವಿಜಿ ಸುದ್ದಿ, ದಾವಣಗೆರೆ: ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಪ್ರಕರಣಗಳನ್ನು ಜನರ ಮುಂದಿಡಲು ಸ್ಪೀಕ್ ಆಫ್ ಕರ್ನಾಟಕ ಎಂಬ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿಗಳನ್ನು ಏರ್ಪಿಡಿದ್ದು, ಉಸ್ತುವಾರಿಗಳಾದ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಸೋಮವಾರ ಬೆಳೆಗ್ಗೆ 11 ಗಂಟೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಎಚ್. ಬಿ. ಮಂಜಪ್ಪ ಹೇಳಿದರು.
ಈ ಸುದ್ದಿಗೋಷ್ಠಿಯಲ್ಲಿ ಪಕ್ಷದ ಹಿರಿಯರು ಮಾಜಿ ಸಚಿವರು, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ , ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪ , ಹರಿಹರದ ಶಾಸಕ ಎಸ್.ರಾಮಪ್ಪ , ಮಾಜಿ ಶಾಸಕ ಹೆಚ್.ಪಿ.ರಾಜೇಶ್ , ವಡ್ನಾಳ ರಾಜಣ್ಣ , ಡಿ.ಜಿ.ಶಾಂತನಗೌಡ್ರು , 2018 ರ ಚುನಾವಣೆಯ ಮಾಯಕೊಂಡ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ಬಸವಂತಪ್ಪ ಭಾಗಿಯಾಗಲಿದ್ದಾರೆ ಎಂದರು.

ಈ ಸುದ್ದಿಗೋಷ್ಠಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು , ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಸಮಿತಿಯ ಪದಾಧಿಕಾರಿಗಳು , ಜಿಲ್ಲಾ ಸಮಿತಿಯ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರು ಹಾಗೂ ಎಲ್ಲಾ ತಾಲ್ಲೂಕು ಸಂಚಾಲಕರುಗಳು , ಕಾಂಗ್ರೆಸ್ ಪಕ್ಷದ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳು , ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.



