ಡಿವಿಜಿ ಸುದ್ದಿ, ಹೊನ್ನಾಳಿ: ತಾಲ್ಲೂಕಿನ ಸಾಸ್ವೆಹಳ್ಳಿ ಸಮೀಪದ ಕ್ಯಾಸಿನಕೆರೆ ಗ್ರಾಮದ ಒಂದೇ ಕುಟುಂಬದ ಇಬ್ಬರಲ್ಲಿ ಕೊರೊನಾ ಸೋಂಕು ಬಂದಿರುವ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ತಂದೆ-ಮಗನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಕುಟುಂಬದ ನಾಲ್ವರನ್ನು ಹೊನ್ನಾಳಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಇನ್ನು ಶಂಕಿತರ ಮನೆ ಸುತ್ತಮುತ್ತ 100 ಮೀಟರ್ ಸೀಲ್ ಡೌನ್ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಾಸ್ವೆಹಳ್ಳಿ ಸರ್ಕಾರಿ ಶಾಲೆಯಲ್ಲಿ 50 ಜನರ ಗಂಟಲು ದ್ರವವನ್ನು ಮಾದರಿ ಸಂಗ್ರಹಿಸಲಾಗಿದೆ.



