Connect with us

Dvg Suddi-Kannada News

ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆ

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆ

ಡಿವಿಜಿ ಸುದ್ದಿ, ದಾವಣಗೆರೆ : ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಮಾ. 17 ರಂದು ಫ್ರಾನ್ಸ್ ನಿಂದ ಅಬುಧಾಬಿ ಮೂಲಕ ಬೆಂಗಳೂರಿಗೆ ಬಂದಿದ್ದ. ಆನಂತರ ಮೆಜೆಸ್ಟಿಕ್ ನಿಂದ ಬಸ್ ಮೂಲಕ‌ ಮಾ. 22 ರಂದು ದಾವಣಗೆರೆ ಬಂದಿದ್ದ ವ್ಯಕ್ತಿಗೆ ಪಾಸಿಟಿವ್ ಪತ್ತೆಯಾಗಿದೆ. ಈ ವ್ಯಕ್ತಿ 18 ಜನರ ಜೊತೆ ಸಂಪರ್ಕದಲ್ಲಿದ್ದು, ಎಲ್ಲರ ಮೇಲೂ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ವಿದೇಶದಿಂದ ಬಂದವರನ್ನು ತಪಾಸಣೆಗೆ ಒಳಪಡಿಸಿದ್ದಾಗ ಈ ಪ್ರಕರಣ ಪತ್ತೆಯಾಗಿದೆ. ದಾವಣಗೆರೆಯ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ರಕ್ತದ ಮಾದರಿಯನ್ನು ಶಿವಮೊಗ್ಗ ಲ್ಯಾಬ್ ಗೆ ಕಳುಹಿಸಲಾಗಿತ್ತು. ವರದಿಯಲ್ಲಿ ವ್ಯಕ್ತಿಯೊರ್ವನಿಗೆ ಪಾಸಿಟಿವ್ ಇರುವುದು‌ ಸಾಬೀತು ಆಗಿದೆ. ಸದ್ಯ ವ್ಯಕ್ತಿಗೆ ಜಿಲ್ಲಾ ಆಸ್ಪತ್ರೆಯ ಐಸೋಲೆಟ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಈಗಾಗಲೇ ಚಿತ್ರದುರ್ಗದ ಮಹಿಳೆಯೊಬ್ಬರು ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲೆಯಲ್ಲಿ ಎರಡನೇ ಪ್ರಕರಣ ಇದಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top