ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಕೊರೊನಾದಿಂದ ಮೊದಲ ಸಾವು ಸಂಭವಿಸಿದೆ. ಇಂದು ಬೆಳಗ್ಗೆ 3 ಗಂಟೆಗೆ ಮಲೇಬೆನ್ನೂರು ಪೊಲೀಸ್ ಠಾಣೆಯ ಪೇದೆ ಸಾವನ್ನಪ್ಪಿದ್ದಾರೆ.
41 ವರ್ಷದ ವಯಸ್ಸಿನ ಪೇದೆಯಾಗಿದ್ದ ಶಿವರಾಜ್, ಠಾಣೆಯ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವರಾಜ್ ಅವರು ಕಿಡ್ನಿ ಮತ್ತು ಶುಗರ್ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಜೊತೆಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಸಾವು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಮೊದಲ ಕೊರನಾದಿಂದ ಮೃತಪಟ್ಟ ಪ್ರಕರಣವಾಗಿದೆ. ಸರ್ಕಾರದ ಮಾರ್ಗ ಸೂಚಿ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.



