ಡಿವಿಜಿ ಸುದ್ದಿ, ದಾವಣಗೆರೆ: ಟ್ಯೂಷನ್ ಶುಲ್ಕ ಪಾವತಿಸಲಿಲ್ಲ ಎಂಬ ಕಾರಣಕ್ಕೆ ದೆಹಲಿ ಪಬ್ಲಿಕ್ ಶಾಲೆಯು ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳಿಂದ ವಂಚಿತರಾಗುವಂತೆ ಮಾಡಿದೆ.ಆದರಿಂದ ಆ ಶಾಲೆಯ ವಿರುದ್ಧ ಕ್ರಮ ಜರುಗಿಸುವಂತೆ ಎನ್.ಎಸ್.ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಪಾಟೀಲ್ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರವು ಆನ್‌ಲೈನ್ ತರಗತಿಗಳಿಗೆ ಶುಲ್ಕ ವಿಧಿಸುವಂತಿಲ್ಲ ಎಂಬ ಸೂಚನೆ ನೀಡಿರುವುದರಿಂದ ಆನ್‌ಲೈನ್ ಶುಲ್ಕದ ಬದಲಾಗಿ ಟ್ಯೂಷನ್ ಶುಲ್ಕ ಪಡೆಯಲಾಗುತ್ತಿದೆ. ಜೂನ್ ತಿಂಗಳಿನಿಂದಲೇ ಆನ್‌ಲೈನ್ ತರಗತಿಗಳನ್ನು ಆರಂಭಿಸಿದ್ದು, ವಾರ್ಷಿಕ ಶುಲ್ಕವನ್ನು ನಾಲ್ಕು ಕಂತುಗಳಲ್ಲಿ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಇಲ್ಲಿಯವರೆಗೂ ಯಾರು ಶುಲ್ಕ ಪಾವತಿಸಿಲ್ಲ ಅಂತಹ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ಕಡಿತ ಮಾಡಲಾಗಿದೆ.
ಕೊರೊನಾ ಲಾಕ್ ಡೌನ್ ನಿಂದಾಗಿ ಕೆಲವು ಪೋಷಕರಿಗೆ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿರುತ್ತಾರೆ. ಆದ್ದರಿಂದ ಇಂತಹ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಬೇಕೆಂದು ಒತ್ತಾಯಿಸುತ್ತೇನೆ ಹಾಗೂ ಯಾವುದೇ ಶಾಲೆಗಳು ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಮಾಡಲು ಒತ್ತಾಯಿಸ ದಂತೆ ಸರ್ಕಾರ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.



