ಡಿವಿಜಿಸುದ್ದಿ.ಕಾಂ. ದಾವಣಗೆರೆ: ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಆನ್‍ಲೈನ್ ನೋಂದಣಿಗೆ ಅ.3 ರಂದು ಕೊನೆಯ ದಿನವಾಗಿದೆ.
ಸಮಾಜ ಕಲ್ಯಾಣ ಇಲಾಖೆಯ www.sw.kar.nic.in ವೆಬ್‍ಸೈಟ್‍ನಲ್ಲಿ ಯಾತ್ರೆಗಳು ನೋಂದಣಿ ಮಾಡಿಕೊಳ್ಳಬಹುದು. ಆಸಕ್ತರು ನೋಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08192-231782 ಗೆ ಸಂಪರ್ಕಿಸಿ.