ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ 43ನೇ ವಾರ್ಡಿನ ಹೊಸ ಕುಂದುವಾಡ ಗ್ರಾಮದಲ್ಲಿ ಪಾಲಿಕೆ ಸದಸ್ಯ ಕಲ್ಲಳ್ಳಿ ನಾಗರಾಜ್ ಅವರು 450ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಳ್ಳಾರಿ ಲೋಕೇಶ್, ಹನುಮಂತಪ್ಪ, ಬಣಕಾರ್ ಸಿದ್ದಪ್ಪ, ಎಂ.ಎಸ್ ಚಂದ್ರು,ಸುರೇಶ್ , ದರ್ಶನ್, ಹೇಮಂತ್ ಸೇರಿದಂತೆ ಮತ್ತಿತರರು ಇದ್ದರು.




