ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಹಾತ್ಮ ಗಾಂಧಿಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಗಾಂಧಿ ಮತ್ತು ಶಾಸ್ತ್ರಿ ಅವರ ಸಂದೇಶ ಸಾರುವ ಸಲುವಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಕಾರ್ಯಕರ್ತರು ಶ್ವೇತ ವರ್ಣದ ಬಟ್ಟೆ ಧರಿಸಿ ತಲೆಗೆ ಟೋಪಿ ಹಾಕಿಕೊಂಡು ಹಜ್ಜೆ ಹಾಕಿದ್ರು.
ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮುಖಾಂತರ ಪ್ರಾರಂಭಗೊಂಡು ಮಹಾನಗರ ಪಾಲಿಕೆಯ ರಾಷ್ಟ್ರಪಿತ ಗಾಂಧಿಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಖಾಂತರ ಜಾಥಾ ಅಂತ್ಯಗೊಳಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು,ಯುವಘಟಕ ಕಾರ್ಯಕರ್ತರು ಸೇರಿದಂತೆ ಅನೇಕರು ಭಾಗಿಯಾಗಿದ್ರು.