Connect with us

Dvg Suddi-Kannada News

ಸತ್ಯ-ಅಹಿಂಸೆ ಗಾಂಧಿಜಿ ಅವರ ಪ್ರಬಲ ಅಸ್ತ್ರ: ಎಸ್.ಎ.ರವೀಂದ್ರನಾಥ್

ಮುಖಪುಟ

ಸತ್ಯ-ಅಹಿಂಸೆ ಗಾಂಧಿಜಿ ಅವರ ಪ್ರಬಲ ಅಸ್ತ್ರ: ಎಸ್.ಎ.ರವೀಂದ್ರನಾಥ್

ಡಿವಿಜಿ ಸುದ್ದಿ.ಕಾಂ, ದಾವಣಗೆರೆ:ಸತ್ಯ ಮತ್ತು ಅಹಿಂಸೆಯ ಪಾಲನೆ  ಮೂಲಕ  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಪುರುಷ ಮಹಾತ್ಮ ಗಾಂಧಿಜಿ ಎಂದು ಶಾಸಕ ಎಸ್.ಎ ರವೀಂದ್ರನಾಥ್ ಹೇಳಿದರು.

ಮಹಾನಗರಪಾಲಿಕೆಯ ಆವರಣದಲ್ಲಿರುವ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂಟಪದಲ್ಲಿ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಜಯಂತಿಯನ್ನು ನಾವೆಲ್ಲರೂ ಅರ್ಥಪೂರ್ಣವಾಗಿ ಸಡಗರದಿಂದ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಸರಳ ಮತ್ತು ಸ್ವಾಭಿಮಾನಿ ನಾಯಕರಾಗಿದ್ದರು. ಉತ್ತಮ ಪ್ರಧಾನಿಯಾಗಿದ್ದರು. ದೇಶದಲ್ಲಿ ಆಹಾರ ಕೊರತೆ ಎದುರಾದಾಗ ದೇಶವಾಸಿಗಳೆಲ್ಲ ಸೋಮವಾರ ಉಪವಾಸ ಮಾಡುವ ಮೂಲಕ ಆಹಾರ ಕೊರತೆ ನೀಗಿಸಬೇಕೆಂದು ಕರೆ ನೀಡಿದ್ದರು ಎಂದರು.

ಸಿದ್ದಗಂಗಾ ಶಾಲೆಯ ಅನುಪಮಾ ಕೆ.ಪಾಟಿಲ್ ಮತ್ತು ಅನುಷಾ ಭಗವದ್ಗೀತೆಯ ಕೆಲವು ಶ್ಲೋಕಗಳನ್ನು ಪಠಿಸಿದರು. ಬಾಪೂಜಿ ಶಾಲೆಯ ಮಹಮದ್ ಸಾದಿಕ್ ಹಾಗೂ ಸಿದ್ದಗಂಗಾ ಪ್ರೌಢಶಾಲೆಯ ಮಸ್ಕಾನ್.ಎ ಇವರು ಕುರಾನ್‌ನ ಕೆಲವು ಬೋಧನೆಯನ್ನು ಪಠಣೆ ಮಾಡಿದರು. ಹಾಗೂ ಸಿದ್ದಗಂಗಾ ಶಾಲೆಯ ಅನುಷಾ ಬೈಬಲ್‌ನ ಕೆಲ ಬೋಧನೆ ಪಠಿಸಿದರು.

ನಗರದ ಸಿದ್ದಗಂಗಾ ಪ್ರೌಢಶಾಲೆ ಹಾಗೂ ಈಶ್ವರಮ್ಮ ಶಾಲೆಯ ವಿದ್ಯಾರ್ಥಿಗಳು ಸಾಮೂಹಿಕ ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಖಾದಿ ಮತ್ತು ಗ್ರಾಮೋದ್ಯೋಗ  ಮಂಡಳಿ ವತಿಯಿಂದ ಚರಕಗಳ ಪ್ರದರ್ಶನ ಏರ್ಪಡಿಸಲಾಗಿತ್ತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿಯವರ ಅಪರೂಪದ ಛಾಯಾಚಿತ್ರ ಪ್ರದರ್ಶನ ಹಾಗೂ ಬೊಳುವಾರು ಮಹಮದ್ ಕುಂಞ ರಚಿಸಿರುವ ‘ಪಾಪು ಬಾಪು’ ಕಿರುಪುಸ್ತಕ ಬಿಡುಗಡೆಗೊಳಿಸಲಾಯಿತು. ಮುಖ್ಯಮಂತ್ರಿ  ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ ರೇಣುಕಾರ್ಚಾರ ಪ ಪರಿಸರಸ್ನೇಹಿ  ವಸ್ತು ಪ್ರದರ್ಶನ ಉದ್ಘಾಟಿಸಿದರು.

ವಿವಿಧ ಕಾರ್ಯಕ್ರಮಕ್ಕೆ  ಚಾಲನೆ

ಇದೇ ವೇಳೆ ಅಂಗೀಕಾರ್ ಆಂದೋಲನ, ಯೋಜನೆಯ ಅನಿಲ ಸಂಪರ್ಕ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ, ಎಲ್‌ಇಡಿ ಬಲ್ಬ್ ವಿತರಣೆ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಹಾಗೂ ಇ-ಆಟೋಗೆ ಚಾಲನೆ ನೀಡಿದರು. ಪಾಲಿಕೆ ಮಂಜುನಾಥ್ ಬಳ್ಳಾರಿ ಪ್ಲಾಸ್ಟಿಕ್ ಬಳಕೆ ನಿಷೇಧ ಹಾಗೂ ಸ್ವಚ್ಚ ಭಾರತ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಬಸವರಾಜ್, ಜಿ.ಪಂ ಸದಸ್ಯ ಬಸವಂತಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ಪಿ ಹನುಮಂತರಾಯ, ಜಿ.ಪಂ ಸಿಇಒ ಪದ್ಮಾ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ವಿಶೇಷ ಭೂಸ್ವಾನಾಧಿಕಾರಿ ರೇಷ್ಮಾ ಹಾನಗಲ್, ಸ್ಮಾರ್ಟ್ ಸಿಟಿ  ವ್ಯವಸ್ಥಾಪಕ ರವಿಂದ್ರ ಮಲ್ಲಾಪುರ, ಡಿಡಿಪಿಯು ನಿರಂಜನ್, ತಹಶೀಲ್ದಾರ್ ಸಂತೋಷ್‌ಕುಮಾರ್, ಡಿಹೆಚ್‌ಓ ಡಾ.ರಾಘವೇಂದ್ರ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

 

 

 

 

 

Click to comment

Leave a Reply

Your email address will not be published. Required fields are marked *

More in ಮುಖಪುಟ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top