ಡಿವಿಜಿಸುದ್ದಿ.ಕಾಂ, ದಾವಣಗೆರೆ: ನಗರದ ಶ್ರೀಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಶಿಗೀ ಹುಣ್ಣಿಮೆ ಅಂಗವಾಗಿ ಅ. 13 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಶಂಕರ ಮಠದಲ್ಲಿ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ನಡೆಯುವ ಈ ಆಧ್ಯಾತ್ಮ ಸಮಾರಂಭವನ್ನು ಈ ಬಾರಿಯ ಉತ್ತಮ್‌ಚಂದ್ ಗಾಂಧಿ ಮತ್ತು ಕುಟುಂಬ ನಡೆಸಿಕೊಡಲಿದೆ. ಕಳೆದ 19 ವರ್ಷಗಳಿಂದಲೂ ನಿರಂತರವಾಗಿ ಪ್ರತಿ ಪೂರ್ಣಿಮೆಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆ ನಡೆಯಲಿದೆ. ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಸಮಿತಿ ಕೋರಿದೆ.



