ನಿತ್ಯ ಜೀವನ ಕನ್ನಡವಾಗಲಿ; ಪ್ರೊ. ಪ್ರಸಾದ್ ಬಂಗೇರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಕನ್ನಡ ಭಾಷೆ ಕೇವಲ ಮಾತು, ಪುಸ್ತಕ, ಕಾರ್ಯಕ್ರಮಕ್ಕೆ  ಸೀಮಿತವಾಗದೆ, ನಿತ್ಯ ಜೀವನದಲ್ಲಿ ಕೂಡ ಅಳವಡಿಸಿಕೂಳ್ಳವಂತಾಗಬೇಕೆಂದು ಪ್ರಾಚಾರ್ಯ ಪ್ರೊ. ಬಂಗೇರ್ ಅಭಿಪ್ರಾಯಪಟ್ಟರು.

ಮಾಗನೂರು ಬಸಪ್ಪ ಮಹಾ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕನ್ನಡ ರಾಜೋತ್ಸವ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ಮಡ ಎನ್ನುವುದ ನಮ್ಮೆಲ್ಲರ ಉಸಿರು. ಇದು ಯಾವಾಗಲೂ ಹಸಿರಾಗಬೇಕು. ನಮಗೆ ಕನ್ನಡ ತಾಯಿ ಭುವನೇಶ್ವರಿ ಮೊದಲ ತಾಯಿ. ಅವಳನ್ನು ಸದಾ ಸ್ಮರಿಸುತ್ತಾ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಿ ಎಂದರು.

maganuru basappa dvgsuddi 1

ಸಹಾಯಕ ಪ್ರಾಧ್ಯಾಪಕ ಎಸ್.ಜಿ. ಶಾಂತರಾಜ್  ಮಾತನಾಡಿ, ಕನ್ನಡಕ್ಕೆ 2 ಸಾವಿರ ವರ್ಷಗಳ ಇತಿಹಾಸವಿದೆ. ಹಲ್ಮಿಡಿ ಶಾಸನ, ಬಾದಾಮಿ ಶಾಸನದಲ್ಲಿ ಕನ್ನಡದ ಬಗ್ಗೆ ಇರುವ ಕಂಪಿದೆ.  ಕವಿ ರಾಜಮಾರ್ಗ ಕನ್ನಡದ  ಐತಿಹಾಸಿಕ ಕೃತಿ ಎಂದರು.

ಶಿಕ್ಷಕಿ ಮಂಜುಳಾ , ಹರಿದು ಹಂಚಿ ಹೋಗಿದ್ದ ಕನ್ನಡಿರನ್ನು ಏಕೀಕರಣ ಚಳುವಳಿ  ಮೂಲಕ  ಒಂದುಗೂಡಿಸಿ 1956 ರಲ್ಲಿ ಕರ್ನಾಟಕ ರಾಜ್ಯ ಉದಯವಾಯಿತು. ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗೂ ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಿ, ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು ಎಂದರು.

ಶಿಕ್ಷಕಿ  ಶೃತಿ, ಕನ್ನಡಕ್ಕೊಂದು ಬಾವುಟ ಅವಶ್ಯಕತೆಯನ್ನು ಮನಗೊಂಡ ಕನ್ನಡದ ಹೋರಾಟಗಾರ ಎಂ. ರಾಮಮೂರ್ತಿ ಅವರು ಹಳದಿ ಹಾಗೂ ಕೆಂಪು ಬಣ್ಣದ  ಬಾವುಟ ಸಿದ್ಧಪಡಿಸಿದರು. ಮೂಲತಃ ಹಳದಿ ಬಣ್ಣವು ಕನ್ನಡಾಂಬೇಯ ಆರಿಶಿನ ಮತ್ತು ಕುಂಕುಮವನ್ನು ಸೂಚಿಸುತ್ತದೆ ಹಾಗೂ ಹಳದಿ ಬಣ್ಣವು ಶಾಂತಿ, ಸೌಹಾರ್ದತೆ ಸೂಚಿಸಿದರೆ ಕೆಂಪು ಬಣ್ಣ ಕ್ರಾಂತಿಯ ಸಂದೇಶ ನೀಡುತ್ತದೆ. ಕನ್ನಡಿಗರೂ ಶಾಂತಿಗೆ ಬದ್ಧ, ಯುದ್ಧಕ್ಕೂ ಸಿದ್ಧ ಎಂಬ ಸಂದೇಶವನ್ನು ನೀಡುತ್ತದೆ  ಎಂದರು.

ಆರಂಭದಲ್ಲಿ ಕನ್ನಡ ಬಾವುಟ ಸಿದ್ಧಗೊಂಡಾಗ ಬಾವುಟದ ಮಧ್ಯೆ ಕರ್ನಾಟಕದ ಭೂಪಟ ಮತ್ತು ಅದರ ನಡುವಿನಲ್ಲಿ ಏಳು ಕವಲುಗಳುಳ್ಳ ತೆನೆಯ ಚಿತ್ರವಿತ್ತು. ಮುದ್ರಿಸಲು ಸ್ವಲ್ಪ ಕಷ್ಟವಾಗುತ್ತಿದ್ದರಿಂದ ಅದನ್ನು ತೆಗೆದು ಕೇವಲ ಹಳದಿ ಮತ್ತು ಕೆಂಪು ಬಣ್ಣವನ್ನು ಮಾತ್ರ ಉಳಿಸಿಕೊಳ್ಳಲಾಯಿತು ಎಂದರು.

ಈ ಸಂದರ್ಭದಲ್ಲಿ ಮಾಗನೂರು ಬಸಪ್ಪ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥರಾದ ಶಿರಗಂಬಿ , ಎಸ್ ಎಸ್ ಎಂಬಿ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ. ಪ್ರೇಮ, ಪೌಢಶಾಲಾ ವಿಭಾಗದ ಮುಖ್ಯಸ್ಥರಾದ ಕುಸುಮಾ, ಪಬ್ಲಿಕ್ ಸ್ಕೂಲ್  ಪ್ರಾಚಾರ್ಯರಾದ ವಾಣಿಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *