Connect with us

Dvgsuddi Kannada | online news portal | Kannada news online

ಕೊರೋನಾ ವೈರಸ್ ಭೀತಿ, ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿಯೂ ತಪಾಸಣೆ

ದಾವಣಗೆರೆ

ಕೊರೋನಾ ವೈರಸ್ ಭೀತಿ, ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿಯೂ ತಪಾಸಣೆ

ಡಿವಿಜಿ ಸುದ್ದಿ, ದಾವಣಗೆರೆ: ಆರೋಗ್ಯ ಇಲಾಖೆ ಸೂಚನೆ ಹಿನ್ನೆಲೆ ದಾವಣಗೆರೆಯಿಂದ ವಿದೇಶ ಪ್ರವಾಸ ಕೈಗೊಂಡವರನ್ನು ಚೀಗಟೇರಿ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಯಿತು.

ಹಾಂಕಾಂಗ್, ಸಿಂಗಾಪುರ, ಥೈಲ್ಯಾಂಡ್, ಮಲೇಶಿಯಾ, ಜಪಾನ್, ಕೊರಿಯ, ವಿಯೆಟ್ನಾಂ, ಇಂಡೋನೇಶಿಯಾ, ನೇಪಾಳ, ಇಟಲಿ, ಇರಾನ್, ಯು.ಎ.ಇ ದೇಶಗಳು ಸೇರಿದಂತೆ ಒಟ್ಟು 12 ದೇಶಗಳಿಗೆ ಪ್ರವಾಸ ಕೈಗೊಂಡಿದ್ದ 14 ಜನ ಪ್ರವಾಸಿಗರನ್ನು ತಪಾಸಣೆಗೆ ಒಳಪಡಿಸಲಾಯಿತು.

ವಿದೇಶಿ ಪ್ರಯಾಣ ಬೆಳೆಸಿದ್ದ  ಪ್ರವಾಸಿಗರ ಪಟ್ಟಿ ಆಧರಿಸಿ ಪ್ರವಾಸಿಗರ ಮನೆಗಳಿಗೆ ಭೇಟಿ ನೀಡಿ ಕೊರೋನಾ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದ್ದು, ಪ್ರಯಾಣಿಕರನ್ನು 14 ದಿನಗಳ ಕಾಲ ಮನೆಯೊಳಗೇ ಇರಿಸಿ ತೀವ್ರ ನಿಗಾವಣೆ ಮಾಡಲಾಗಿದೆ. ತಪಾಸಣೆಗೊಳಪಟ್ಟ ಯಾವುದೇ ವ್ಯಕ್ತಿಗೆ ಸೋಂಕು ಕಂಡುಬಂದಿಲ್ಲ.

karona virus 2

ಜಿಲ್ಲೆಯಾದ್ಯಂತ ಎಲ್ಲಾ ವೈದ್ಯರಿಗೆ, ಸಿಬ್ಬಂದಿಗಳಿಗೆ ಕೊರೋನಾ ಸೋಂಕಿನ ಬಗ್ಗೆ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಚಿಗಟೇರಿ ಜಿಲ್ಲಾ ಆಸ್ಪತ್ರೆ, ಬಾಪೂಜಿ ಆಸ್ಪತ್ರೆ ಮತ್ತು ಎಸ್ಎಸ್ಐಎಂ ಮತ್ತು ಆರ್ ಸಿ ಆಸ್ಪತ್ರೆಗಳಲ್ಲಿ ತಲಾ 05 ಬೆಡ್‍ಗಳನ್ನು ಪ್ರತ್ಯೇಕವಾಗಿ ಇದಕ್ಕಾಗಿ ಕಾಯ್ದಿರಿಸಲಾಗಿದೆ.  ಪರೀಕ್ಷೆಗೆ ತಜ್ಞರನ್ನು ಸಹ ನೇಮಿಸಲಾಗಿದೆ. ಪ್ರತಿ ತಿಂಗಳು ವಿದೇಶ ಪ್ರವಾಸಿಗರನ್ನು ತಪಾಸಣೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಘವೇಂದ್ರಸ್ವಾಮಿ ಹೆಚ್.ಎಸ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ ರಾಘವನ್ ಮತ್ತು ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ.ಕೆ.ಹೆಚ್ ಯತೀಶ್ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top