ಡಿವಿಜಿ ಸುದ್ದಿ.ಕಾಂ ದಾವಣಗೆರೆ: ಸಾರ್ವಜನಿಕರು ಬ್ಯಾಂಕ್‌ಗಳಲ್ಲಿ ವಿವಿಧ ಬಗೆಯ ಸಾಲ ಪಡೆದು ನಿರ್ದಿಷ್ಟ ಉದ್ದೇಶಗಳಿಗೆ ಬಳಸಿ ಸಕಾಲದಲ್ಲಿ ಸಾಲ ಮರುಪಾವತಿ ಮಾಡವ ಮೂಲಕ ಬ್ಯಾಂಕ್‌ಗಳೊಂದಿಗೆ ಉತ್ತಮ ವ್ಯವಹಾರ ಬೆಳೆಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಕೆನರಾ ಬ್ಯಾಂಕ್ ನ ಲೀಡ್ ಬ್ಯಾಂಕ್ ತೋಗಟವೀರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಹಕರೆಡೆಗೆ ಒಂದು ಹೆಜ್ಜೆ..`ಗ್ರಾಹಕರ ಮೇಳ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೇಳದಲ್ಲಿ 1,400 ಕ್ಕೂ ಹೆಚ್ಚು ಜನರಿಗೆ 21 ಕೋಟಿವರೆಗೂ ಸಾಲ ನೀಡುತ್ತಿದ್ದು, ಗ್ರಾಹಕರು ಪಡೆದ ಸಾಲಗಳನ್ನು ಸದ್ಬಳಕೆ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಮರುಪಾವತಿ ಮಾಡಿಬೇಕು. ಈ ಮೂಲಕ ಬ್ಯಾಂಕ್‌ನೊಂದಿಗೆ ಉತ್ತಮ ವ್ಯವಹಾರ ಕಾಪಾಡಿಕೊಳ್ಳಬೇಕು ಎಂದರು.
ಆರ್ಥಿಕ ಬೆಳವಣಿಗೆಯಿಂದಾಗಿ ಕಳೆದ ಹತ್ತು ವರ್ಷಗಳಲ್ಲಿ ಬ್ಯಾಂಕ್ ವಹಿವಾಟು ಹೆಚಾಗುತ್ತಿದೆ. ಬ್ಯಾಂಕುಗಳು ವಿವಿಧ ಯೋಜನೆಗಳಲ್ಲಿ ಮಹಿಳೆಯರೂ ಸೇರಿದಂತೆ ಪ್ರತಿಯೊಬ್ಬರಿಗೂ ವಿವಿಧ ಉದ್ದೇಶಗಳಿಗೆ ಸಾಲ ನೀಡಲಾಗುತ್ತಿದೆ. ನಾನು ಕೂಡ ಈ ಜಿಲ್ಲೆಯಲ್ಲಿ ಹೆಚ್ಚಿನ ಕೆಲಸ ಮಾಡುವ ಉದ್ದೇಶ ಹೊಂದಿದ್ದೇನೆ. ಇದಕ್ಕಾಗಿ ಬ್ಯಾಂಕುಗಳಿಂದ ಹೆಚ್ಚಿನ ಸೇವೆಗಳನ್ನು ನಿರಿಕ್ಷಿಸುತ್ತೇನೆ ಎಂದು ಹೇಳಿದರು.
ಜಿಲ್ಲಾ ಕೆನರಾ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ ಮಾತನಾಡಿ, ಕೇದ್ರ ಸರ್ಕಾರ ಬ್ಯಾಂಕುಗಳು ಸಾಲ ನೀಡಲು ಸಿದ್ಧವಾಗಿವೆ ಎಂಬುದನ್ನು ಗ್ರಾಹಕರಿಗೆ ತಿಳಿಸಲು ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಗ್ರಾಹಕರು ಈ ಮೇಳದಲ್ಲಿ ಸಾಲಗಳ ಕುರಿತು ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ನಬಾರ್ಡ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ರವೀಂದ್ರ ವಿ ಮಾತನಾಡಿ, ನಬಾರ್ಡ್ ವತಿಯಿಂದ ಸಾಮಾನ್ಯ ವರ್ಗದರಿಗೆ ಶೇ.25 ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಶೇ.33 ಕುರಿ ಮೇಕೆ ಸಾಕಲು ಸಬ್ಸಿಡಿ ನೀಡಲಾಗುತ್ತಿದೆ. ಆಹಾರ ಸಾಮಾಗ್ರಿಗಳನ್ನು ಶೇಕರಣೆ ಮಾಡಲು ಗೊದಾಮುಗಳನ್ನು ಕಟ್ಟಲು 3 ಕೋಟಿ ವರೆಗೆ ಸಾಲ ನೀಡುತ್ತಿದ್ದು, ಮಹಿಳೆಯರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ 1 ಕೋಟಿವರೆಗೂ ಸಬ್ಸಿಡಿ ಸಿಗಲಿದೆ ಸಾಮಾನ್ಯ ವರ್ಗದವರಿಗೆ 75 ಲಕ್ಷದವರೆಗೆ ಸಬ್ಸಿಡಿ ಸಿಗಲಿದೆ ಎಂದರು.
ಎಸ್.ಬಿ.ಐ ಪ್ರಾದೇಶಿಕ ವ್ಯವಸ್ಥಾಪಕ ರಾಜೇಶ್.ಡಿ, ಕರ್ನಾಟಕ ಗ್ರಾಮೀಣ ಪ್ರಾದೇಶಿಕ ವ್ಯವಸ್ಥಾಪಕ ಶಂಕರ್ ಕನವಳ್ಳಿ, ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ನವೀನ್‌ಕುಮಾರ್. ಎನ್, ಬೆಂಗಳೂರು ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮಹಾ ಪ್ರಬಂಧಕ ಎನ್. ಲಕ್ಷ್ಮೀ ನಾರಾಯಣ, ಜಿಲ್ಲಾ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶೃತ ಡಿ. ಶಾಸ್ತ್ರಿ ಸೇರಿದಂತೆ ವಿವಿಧ ಬ್ಯಾಂಕ್ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.