ಡಿವಿಜಿ ಸುದ್ದಿ, ದಾವಣಗೆರೆ: ಕಳೆದ ಎರಡು ಬಾರಿ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದೇನೆ. ಈ ಬಾರಿ ಮೂರನೇ ಸಲ ಪಿಜೆ ಬಡಾವಣೆಯ ವಾರ್ಡ್ ನಂ 17 ರಲ್ಲಿ ಸ್ಪರ್ಧೆ ಮಾಡಿದ್ದು, ಮತದಾರರು ನನಗೂ ಒಂದು ಅವಕಾಶ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಬಿ.ಜಿ. ಮತದಾರಲ್ಲಿ ಮನವಿ ಮಾಡಿಕೊಂಡರು.
ನಾಮ ಪತ್ರ ಸಲ್ಲಿಕೆಗೂ ಮುನ್ನ ರಾಮ್ ಅಂಡ್ ಕೋ ಸರ್ಕಲ್ ಬಳಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕಳೆದ ಎರಡು ಬಾರಿ ಸೋತಿದ್ದೇನೆ. ದಾವಣಗೆರೆಯಲ್ಲಿ ಸುಮಾರು ವರ್ಷಗಳಿಂದ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ ಎಂದು ತಿಳಿಸಿದರು.
ವಾರ್ಡ್ ನಂಬರ್ 17 ರಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯ ಮಾಡುವ ಯೋಜನೆ ರೂಪಿಸಿದ್ದೇನೆ. ಈ ನಿಟ್ಟಿನಲ್ಲಿ ಪಿಜೆ ಬಡಾವಣೆಯ ಜನರು ನನಗೂ ಒಂದು ಅವಕಾಶ ಕಲ್ಪಿಸಬೇಕು ಎಂದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿ ಕೂಡ ಬಿಜೆಪಿ ಸರ್ಕಾರ ಇದೆ. ಸ್ಥಳೀಯ ಮಟ್ಟದಲ್ಲಿಯೂ ಬಿಜೆಪಿ ಸರ್ಕಾರ ಬಂದರೆ, ಇನ್ನು ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದರು.



