ಡಿವಿಜಿ ಸುದ್ದಿ, ದಾವಣಗೆರೆ: ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಎಂ.ಎಸ್.ಶಿವಣ್ಣ ಅವರ ನಿಧನಕ್ಕೆ ಮಾಜಿ ಸಚಿವ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಸಂತಾಪ ಸೂಚಿಸಿದ್ದಾರೆ.

ಎಂ.ಎಸ್.ಶಿವಣ್ಣನವರು 1970ರಲ್ಲಿ ಸಿದ್ಧಗಂಗಾ ವಿದ್ಯಾಸಂಸ್ಥೆಯನ್ನು ಆರಂಭಿಸಿದ್ದರು. ಶಿಕ್ಷಣ ಸಂಸ್ಥೆ 50 ವರುರ್ಷ ಪೂರೈಸಲು ಅವಿರತ ಶ್ರಮಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹವನ್ನು ನೀಡುವ ಮೂಲಕ ದಾವಣಗೆರೆ ನಗರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗಕ್ಕೆ ಹಾಗೂ ಲಕ್ಷಾಂತರ ವಿದ್ಯಾರ್ಥಿ ಸಮೂಹಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು, ಆ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ ಎಂದು ಸಂತಾಪ ಸೂಚಿಸಿದ್ದಾರೆ.



