ಡಿವಿಜಿ ಸುದ್ದಿ, ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಾರಕ ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಭಾನುವಾರ ಸಂತೆ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಜಿಲ್ಲೆಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹೊರಡಿಸಿರುವುದರಿಂದ ಎಂದಿನಂತೆ ಪ್ರತಿ ಭಾನುವಾರ ನಡೆಯುವ ಸಂತೆಯನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ಪ್ರಯುಕ್ತ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಸಹಕರಿಸಬೇಕೆಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



