ಮೊಬೈಲ್ ಬಳಕೆಗೆ ಕಡಿವಾಣ ಹಾಕಿ: ಕುಲಪತಿ ಪ್ರೊ.ಎಸ್.ವಿ.ಹಲಸೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ವಿದ್ಯಾರ್ಥಿಗಳು ಓದುವ ಹವ್ಯಾಸ ಕಡಿಮೆ ಮಾಡಿ ಮೊಬೈಲ್ ಬಳಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಇದರಿಂದ ನಿರ್ದಿಷ್ಟ  ಗುರಿ ಸಾಧನೆ ಸಾಧ್ಯವಿಲ್ಲ.  ಮೊಬೈಲ್ ಬಳಕೆ ಕಡಿಮೆ ಮಾಡಿ,  ಗುರಿ ಸಾಧನೆ ಕಡೆ ಗಮನಹರಿಸಿ ಎಂದು ದಾವಣಗೆರೆ ವಿವಿ ಕುಲಪತಿ ಪ್ರೊ.ಎಸ್.ವಿ.ಹಲಸೆ ಹೇಳಿದರು.

ನಗರದ ಎಆರ್ ಜಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳ ಸಹಯೋಗದೊಂದಿಗೆ  ಆಯೋಜಿಸದ್ದ ವಿಶ್ವ ಶಿಕ್ಷಕರ ದಿನಾಚರಣೆ ಕಾರ್ಯಕ್ರ ಉದ್ಘಾಟಿಸಿ ಮಾತನಾಡಿದ ಅವರು, ಇದುವರೆಗೂ ನಾವು ಸೆಪ್ಟೆಂಬರ್ 5 ರಂದು ಸರ್ವಪಲ್ಲಿ ರಾಧಕೃಷ್ಣನ್ ಅವರ ಜಯಂತಿಯನ್ನು ಶಿಕ್ಷಕರ ದಿನಚರಣೆಯನ್ನಾಗಿ ಆಚರಿಸುತ್ತಿದ್ದೇವೆ. ಆದರೆ ಮೊದಲ ಬಾರಿಗೆ ವಿಶ್ವಸಂಸ್ಥೆ ಘೋಷಣೆಯಂತೆ ವಿಶ್ವ ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವುದು ಹೊಸ ಮೈಲುಗಲ್ಲು ಎಂದರು.

ವಿದ್ಯಾರ್ಥಿಗಳಲ್ಲಿ ಸಕರಾತ್ಮಕ ವರ್ತನೆ ಇರಬೇಕು. ನಕರಾತ್ಮಕ ಧೋರಣೆಯನ್ನು ಬಿಡಬೇಕು. ವಿದ್ಯಾರ್ಥಿಗಳು ಕಲಿಕೆ ಮತ್ತು ಜೀವನ ಎರಡಲ್ಲೂ ಸಮಯದ ಮೌಲ್ಯ ಅರಿತುಕೊಳ್ಳಬೇಕು. ಏಕಲವ್ಯ ರೀತಿಯ ಛಲವನ್ನು ಹೊಂದಬೇಕು ಎಂದು ಕರೆ ನೀಡಿದರು.

ಬಾಪೂಜಿ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ.ಈಶ್ವರಪ್ಪ ಮಾತನಾಡಿ,  ಶಿಕ್ಷಕರ ದಿನಾಚರಣೆ  ಕೇವಲ ಹಾಡಿ ಹೊಗಳಬಾರದು. ಶಿಕ್ಷಕರು ಹೊಣೆಗಾರಿಕೆ ಹಾಗೂ ದೌರ್ಬಲ್ಯಗಳ ಮನನವು ಆಗಬೇಕು ಎಂದರು.

ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಎಸ್.ಬಸವರಾಜಪ್ಪ, ಡಾ.ಜೆ.ಕೆ.ಮಲ್ಲಿಕಾರ್ಜುನಪ್ಪ, ಎಂ.ಎಸ್.ನಾಗರಾಜ್, ಜೆ.ಅನಿತಾಕುಮಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *