ದಾವಣಗೆರೆ: 21 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ , ದಾವಣಗೆರೆ : ತಾಯಿ- ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ  ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ರೂ. 21 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ತಾಯಿ- ಮಕ್ಕಳ ಆಸ್ಪತ್ರೆ ಜೊತೆಗೆ ವೈದ್ಯರು, ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ದಾವಣಗೆರೆ ಇವರ ವತಿಯಿಂದ  ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ 17 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ದಾವಣಗೆರೆ ಸುತ್ತಮುತ್ತಲಿನ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಅವರು  ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದಾವಣಗೆರೆ ಜಿಲ್ಲೆಗೆ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೇಕೆಂದು ಮಂಜೂರು ಮಾಡಿಸಿದ್ದಾರೆ.  ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಇಳಿಮುಖವಾಗಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸುಮಾರು ರೂ.21 ಕೋಟಿ ಅನುದಾನದಲ್ಲಿ ಈ ಕಟ್ಟಡವನ್ನು ಮತ್ತು ವೈದ್ಯರು ಶುಶ್ರೂಷಕರ ವಸತಿಗೃಹ ನಿರ್ಮಿಸುತ್ತಿದೆ. ಇನ್ನು 15 ತಿಂಗಳಲ್ಲಿ ಈ ಕಾಮಗಾರಿಗಳನ್ನು ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.

davangere hospital 2

ದಾವಣಗೆರೆ ನಗರವನ್ನು ಹಸಿರು ನಗರವನ್ನಾಗಿ ಮಾಡಲು ಸುಮಾರು 6500 ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಇಂದು ಸ್ಮಾರ್ಟ್‍ಸಿಟಿ ಯೋಜನೆಯಡಿ ರೂ.15 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಪೂಜೆ ನೆರವೇರಿಸಲಾಗುತ್ತಿದೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಗೆ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಸಮರ್ಪಣೆ ಮಾಡುತ್ತಿದ್ದೇವೆ ಎಂದರು.

ಕೋವಿಡ್‍ನಿಂದ ಸಂಭಿಸುತ್ತಿರುವ ಸಾವುಗಳನ್ನು ನಿಯಂತ್ರಿಸಲು ನಾವು ವಿಫಲರಾಗಿಲ್ಲ. ಅತ್ಯಂತ ಅಚ್ಚುಕಟ್ಟಾಗಿ ಮತ್ತು ಸಮರ್ಪಕವಾಗಿ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಲಾಗುತ್ತಿದೆ. ಕೇಂದ್ರ ಸರ್ಕಾರವೂ ಸಹ ರಾಜ್ಯ ಕೈಗೊಂಡಿರುವ ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ ಲಾಕ್‍ಡೌನ್ ಸಡಿಲಿಕೆ ನಂತರ ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನಿಂದ ಬಂದವರಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಸಮಸ್ಯೆ ಉಂಟಾಗಿದ್ದು ಅದನ್ನು ಸಹ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ.ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ 45 ಸಕ್ರಿಯ ಪ್ರಕರಣಗಳಿದ್ದು, ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದರು.

ಈ ವೇಳೆ ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಪ್ರೊ.ಲಿಂಗಣ್ಣ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪೂರ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾಸ್ಪತ್ರೆ ಡಿಎಸ್ ಡಾ.ನಾಗರಾಜ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ ಮತ್ತಿತರರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *