ಡಿವಿಜಿ ಸುದ್ದಿ, ದಾವಣಗೆರೆ: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜ.20 ರಂದು ಚನ್ನಗಿರಿ ತಾಲ್ಲೂಕಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-236600, 9480806227, 9480806283 ಗೆ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಎ.ಸಿ.ಬಿ ಪೋಲಿಸ್ ಠಾಣೆಯ ಡಿ.ವೈ.ಎಸ್.ಪಿ ಹೆಚ್.ಎಸ್ ಪರಮೇಶ್ವರ್ ತಿಳಿಸಿದ್ದಾರೆ.



