ಡಿವಿಜಿ ಸುದ್ದಿ, ದಾವಣಗೆರೆ: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದು, ನಿಗಮದ ಕ್ಷೇತ್ರಾಧಿಕಾರಿ ಲಂಚ ಸಹಿತ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದೇನೆ.
ದಾವಣಗೆರೆ ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ಮಾಡಲಾಗಿದ್ದು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕ್ಷೇತ್ರಾಧಿಕಾರಿ ಮುರಿಸ್ವಾಮೀ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ಜಯಾ ನಾಯ್ಕ ಎಂಬ ರೈತನಿಂದ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ.ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿವ ತೊಡಿಸಲು ಹತ್ತು ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ದಾಳಿ ನಡೆಸಿದೆ. ಎಸಿಬಿ ಡಿವೈಎಸ್ಪಿ ಪರಮೇಶ್ವರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಲಂಚ ಸ್ವೀಕರಿಸಿದ ಅಧಿಕಾರಿ ಮುರಿಸ್ವಾಮಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಡಿವಿಜಿ ಸುದ್ದಿ, ವಾಟ್ಸ್ ಆಪ್: 7483892205