ಡಿವಿಜಿ ಸುದ್ದಿ, ಚನ್ನಗಿರಿ : ಬೈಕ್ ಅತೀ ವೇಗದ ಚಾಲನೆಯಿಂದ ಚನ್ನಗಿರಿ ತಾಲೂಕಿನ ನವಿಲೆಹಾಳ್ ರಸ್ತೆಯ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಧನಂಜಯ್ (21) ಸ್ಥಳದಲ್ಲಿ ಸಾವನಪ್ಪಿದ್ದಾನೆ. ಹಿಂಬದಿಯ ಸಾವರ ದರ್ಶನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ದಾವಣಗೆರೆ ತಾಲೂಕಿನ ಬಾಡ ಗ್ರಾಮದವರು ಎಂದು ಗುರುತಿಸಲಾಗಿದೆ. ಈ ಸಂಬಂಧ ಸಂತೇಬೆನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಂತೇಬೆನ್ನೂರು ಪಿಎಸ್ಐ ಶಾಂತಲಾ ಅವರು ಭೇಟಿ ನೀಡಿ ಪರಿಶೀಲಿಸಿದರು.




