ಡಿವಿಜಿ ಸುದ್ದಿ, ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಗೋವು ಸಾಕಣೆ ಹಾಗೂ ಕುದುರೆ ಸಾಕಣೆ ಮಾಹಿತಿ ಪಡೆಯಲು ಶಾಸಕ, ಮಾಜಿ ಸಚಿವ, ಶಾಮನೂರು ಶಿವಶಂಕರಪ್ಪನವರ ಫಾರ್ಮ್ ಹೌಸ್‍ಗೆ ಭೇಟಿ ನೀಡಿದ್ದರು.
ಹರಪನಹಳ್ಳಿ ತಾಲೂಕಿನ ದುಗ್ಗಾವತಿಯಲ್ಲಿನ ತೋಟಕ್ಕೆ ಶಾಮನೂರು ಶಿವಶಂರಪ್ಪ ಪುತ್ರ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಜೊತೆ ಭೇಟಿ ನೀಡಿದರು. ಗೋವು ಸಾಕಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ಕಲ್ಲೇಶ್ವರ ರೈಸ್ ಮಿಲ್ ಬಳಿ ಕುದುರೆಗಳ ಪಾಲನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಹೀಗೆ ವಿವಿಧ ಫಾರ್ಮ್ ಹೌಸ್‍ಗೆ ದರ್ಶನ್ ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ. ದಾವಣಗೆರೆಯಲ್ಲಿಯೇ ವಾಸ್ತವ್ಯ ಹೂಡಲಿದ್ದು, ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಉಳಿದುಕೊಳ್ಳದುಕೊಂಡಿದ್ದಾರೆ.ಇಂದು ಬೆಳಗ್ಗೆ ಮತ್ತೆ ಕೆಲ ಪ್ರಗತಿಪರ ರೈತರನ್ನು ದರ್ಶನ್ ಭೇಟಿ ಮಾಡಲಿದ್ದು ಚರ್ಚಿಸಲಿದ್ದಾರೆ . ಈ ವೇಳೆ ತಮ್ಮ ನೆಚ್ಚಿನ ನಟ ದರ್ಶನ್ ನೋಡಲು ಜನ ಮುಗಿಬಿದ್ದಿದ್ದರು



