ಡಿವಿಜಿ ಸುದ್ದಿ, ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೆ ನೀಡಬೇಕಾದ 15 ತಿಂಗಳ ಪ್ರೋತ್ಸಾಹ ಧನ ನೀಡುವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತ ಸಂಘ ವತಿಯಿಂದ ಉಪ ವಿಭಾಗ ಅಧಿಕಾರಿಗಳ ಮೂಲಕ ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತರು. ಫ್ರೀಡಂ ಪಾರ್ಕ್ ನಲ್ಲಿ ಇತ್ತೀಚೆಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡುವುದರ ಜೊತೆಗೆ ಬಾಕಿ ಉಳಿಸಿಕೊಂಡಿರುವ ವೇತನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇದುವರೆಗೂ ಬಾಕಿ ವೇತನ ನೀಡಿಲ್ಲ. ಹೀಗಾಗಿ ವೇತನ ನೀಡವವರೆಗೂ ಕೆಲಸ ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ ಎಂದು ಸಂಘನೆಯ ಉಪಾಧ್ಯಕ್ಷೆ ಅನಿತ ಹೇಳಿದರು.
ಇಲಾಖೆಯ ಪ್ರಕಾರ ಪ್ರತಿ ತಿಂಗಳು ಪ್ರೋತ್ಸಾಹ ಧನವಾಗಿ 2,500 ರೂಪಾಯಿ ನೀಡಬೇಕು. ಆದರೆ, ತಿಂಗಳಿಗೆ ಕೇವಲ 300 ರೂಪಾಯಿ ನೀಡಲಾಗಿದೆ. ಇದೇ ರೀತಿ ಕಳೆದ 15 ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡಿದ್ದು, ವೇತನ ನೀಡುವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯದರ್ಶಿ ನಾಗಮಣಿ ಸೇರಿದಂತೆ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದರು.
ಡಿವಿಜಿ ಸುದ್ದಿ, ವಾಟ್ಸ್ ಆಪ್ :7483892205