ಡಿವಿಜಿ ಸುದ್ದಿ, ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ವತಿಯಿಂದ ಇಂದು ಎ.ವಿ.ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ವಿಧಾನಸಭೆ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಜಿ.ಪಂ ಅಧ್ಯಕ್ಷೆ ಯಶೋಧಮ್ಮ ಮರಳಪ್ಪ, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದ ಜಿ.ಎಂ ಸಿದ್ದೇಶ್ವರ, ದಾವಣಗೆರೆ ಉತ್ತರ ಕ್ಷೇತ್ರದ ವಿಧಾನಸಭೆ ಶಾಸಕರಾದ ಎಸ್.ಎ ರವೀಂದ್ರನಾಥ್ ಹಾಗೂ ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಮಹಾನಗರಪಾಲಿಕೆ ಮೇಯರ್ ಬಿ.ಜೆ ಅಜಯ್‍ಕುಮಾರ್, ಹರಿಹರ–ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ ಸಿಇಓ ಪದ್ಮ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪ ವಿಭಾಗಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಎ.ವಿ.ಕೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಶಿವಪ್ರಕಾಶ್.ಪಿ.ಎಸ್ ಉಪಸ್ಥಿತರಿರಲಿದ್ದಾರೆ.



