ಡಿವಿಜಿ ಸುದ್ದಿ, ಬಳ್ಳಾರಿ: ಜಿಲ್ಲೆಯಲ್ಲಿ ಸದ್ಯ ಲಾಕ್‍ಡೌನ್ ಇಲ್ಲ. ಲಾಕ್ ಡೌನ್ ವಿಧಿಸಿದ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾದರೆ, ಲಾಕ್ ಡೌನ್ ಜಾರಿ ಬಗ್ಗೆ ಚಿಂತನೆ ನಡೆಸಲಾಗವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.
ಬಳ್ಳಾರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಮತ್ತು ಸೋಂಕು ಹರಡುವಿಕೆಗೆ ಸಂಬಂಧಿಸಿದಂತೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಲಾಕ್‍ಡೌನ್ ವಿಧಿಸಲಾಗಿರುವ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಹರಡುವಿಕೆಯ ಪ್ರಮಾಣದಲ್ಲಿ ಆಗುವ ಬದಲಾವಣೆಗಳನ್ನು ಪರಿಶೀಲಿಸಲಾಗುತ್ತದೆ. ನಂತರ ನಮ್ಮಲ್ಲಿ ಅದನ್ನು ಜಾರಿ ಮಾಡಬೇಕಾ..? ಬೇಡ್ವಾ..? ಎನ್ನುವ ಬಗ್ಗೆ ಚರ್ಚಿಸಲಾಗುವುದು ಎಂದರು.
ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬಳ್ಳಾರಿ ಜಿಲ್ಲೆಯಲ್ಲಿ ಇನ್ನೂ 15 ದಿನಗಳ ಕಾಲ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಇಲ್ಲ. ಲಾಕ್‍ಡೌನ್ ವಿಧಿಸುವುದರಿಂದ ನಿತ್ಯ ದುಡಿದು ಜೀವನ ನಡೆಸುವ ಜನರ ಕಷ್ಟಕ್ಕೆ ತಳ್ಳಬಾರದು ಎಂದು ತಿಳಿಸಿದರು.



