ಡಿವಿಜಿ ಸುದ್ದಿ, ದಾವಣಗೆರೆ: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದ ಘಟನೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಜಯದೇವ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು.
ಈ ಘಟನೆ ಪೂರ್ವ ನಿಯೋಜಿತವಾಗಿದ್ದು, ಈ ಗಲಭೆ ಕಾರಣವಾದ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆಗಳನ್ನು ರಾಜ್ಯ ಸರ್ಕಾರ ನಿಷೇಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ದೇಶದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಇದರಿಂದ ಅಲ್ಲಿನ ನಾಗರಿಕರು ಆತಂಕಗೊಂಡಿದ್ದಾರೆ. ಕೋಮುಗಲಭೆಗೆ ಪ್ರಯತ್ನಿಸುತ್ತಿರುವ ಹಾಗೂ ಸಾರ್ವಜನಿಕರು, ಮಾಧ್ಯಮದವರು, ಪೋಲಿಸರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಸ್ಥಳೀಯ ಶಾಸಕ ಅಖಂಡ ಶ್ರೀನಿವಾಸ್ ಅವರ ಮೇಲೆಯೂ ಹಲ್ಲೆಗೆ ಯತ್ನಿಸಲಾಗಿದೆ ಅವರ ಕುಟುಂಬದವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದರು.
ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸುವುದನ್ನು ಬಿಟ್ಟು ಕಾಂಗ್ರೆಸ್ ನವರು ಸಮರ್ಥಿಸಿಕೊಳ್ಳುತ್ತಿರುವುದು ದುರಂತ. ಇಂತಹ ಘಟನೆಗಳಿಗೆ ಪ್ರಚೋದನೆ ನೀಡುತ್ತಿರುವ ಜಮೀರ್ ಅಹಮದ್ ಅವರ ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು ಈ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಘಟನೆಗೆ ಕಾರಣರಾದವರಿಂದಲೇ ಹಾನಿ ನಷ್ಟ ಭರಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಈ ವೇಳೆ ಎಸ್ ಟಿ ವಿರೇಶ್,ಕೆ.ಎಂ ವೀರೇಶ್,ರಂಗನಾಥ್,ಸತೀಶ್ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



