ಡಿವಿಜಿ ಸುದ್ದಿ, ದಾವಣಗೆರೆ : ಹರಿಹರ ಮತ್ತು ದಾವಣಗೆರೆ ತಾಲ್ಲೂಕಿನ ಕೊನೇ ಭಾಗದ ರೈತರಿಗೆ ಮೇ.20 ವರೆಗೆ ಭದ್ರಾ ನಾಲೆ ನೀರು ಹರಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಮುಖ್ಯಮಂತ್ರಿ ಬಿ.ಎಸ್ . ಅವರಿಗೆ ಮನವಿ ಮಾಡಿದ್ದಾರೆ.
ಇನ್ನೂ ಹದಿನೈದು ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಸುವ ಅವಶ್ಯಕತೆಯಿದ್ದು, ರೈತರಿಗೆ ನೀರಿನ ಅವಶ್ಯಕತೆ ಇದೆ. ಈಬ ಗ್ಗೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ ಮೇ 20 ರವರೆಗೆ ಭದ್ರಾ ನಾಲೆಗಳಲ್ಲಿ ನೀರು ಹರಿಸುವಂತೆ ಪತ್ರ ಬರೆದು ವಾಸ್ತವಾಂಶ ವಿವರಿಸಿದ್ದರು.
ಈ ಪತ್ರವನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ಹಾಗೂ ಹರಿಹರ ಮಾಜಿ ಶಾಸಕ ಬಿ.ಪಿ.ಹರೀಶ್ ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಂಸದರ ಪತ್ರ ನೀಡಿ ಭದ್ರಾ ನಾಲೆಗಳಲ್ಲಿ ನೀರು ಹರಿಸುವುದನ್ನು ಮುಂದುವರೆಸುವಂತೆ ಮನವಿ ಮಾಡಿಕೊಂಡರು.

ಜಿಲ್ಲಾ ಉಸ್ತುವಾರಿ ಸಚಿವರ, ಲೋಕಸಭಾ ಸದಸ್ಯರ ಹಾಗೂ ಮಾಜಿ ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಅವರು ನಾಳೆ ಈ ವಿಷಯಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸುವ ಭರವಸೆ ನೀಡಿದ್ದಾರೆ.



