ಡಿವಿಜಿ ಸುದ್ದಿ, ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮಖಿ ಡಿಕ್ಕಿಯಾದ ಪರಿಣಾಮ ತಂದೆ ಹಾಗೂ 3 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳವನೂರು ಸಮೀಪ ನಡೆದಿದೆ.
ತುರ್ಚುಘಟ್ಟ ನಿವಾಸಿಯಾದ ಸಿದ್ದೇಶ್ (30) ಹಾಗೂ ಮೂರು ವರ್ಷದ ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ತುರ್ಚುಘಟ್ಟದಿಂದ ದಾವಣಗೆರೆ ಬರುವಾಗ ಈ ಅಪಘಾತ ನಡೆದಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.