ಡಿವಿಜಿ ಸುದ್ದಿ, ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ಪದಗ್ರಹಣ, ಪಾಲಿಕೆಯ ನೂತನ ಸದಸ್ಯರು, ಪರಾರ್ಜಿತ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಡಿ.4 ರಂದು ಬೆಳಗ್ಗೆ 11ಕ್ಕೆ ರೇಣುಕಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ದಕ್ಷಿಣ ವಿಧನಾ ಸಭಾ ಕ್ಷೇತ್ರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ದೇಶ್ವರ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಶಾಸಕರಾದ ಎಸ್.ಎ .ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಪ್ರೊ. ಲಿಂಗಪ್ಪ, ಕರುಣಾಕರ ರೆಡ್ಡಿ, ಎಸ್.ವಿ ರಾಮಚಂದ್ರ, ಜಿಲ್ಲಾಧ್ಯಕ್ಷ ಯಶವಂತತರಾವ್ ಜಾಧವ್ ಭಾಗಿಯಾಗಲಿದ್ದಾರೆ ಎಂದ್ರು.
ಒಟ್ಟು 45 ವಾರ್ಡ್ ಗಳ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17 ಸ್ಥಾನಗಳಿಸಿದ್ದು, ದಕ್ಷಿಣ ವಿಧನಸಭಾ ಕ್ಷೇತ್ರದ 20 ವಾರ್ಡ್ ಗಳಲ್ಲಿ ಬಿಜೆಪಿ 7 ಸ್ಥಾನ ಗೆದ್ದಿದೆ. ಗೆದ್ದಿರುವ ಅಭ್ಯರ್ಥಿಗಳ ಜೊತೆಗೆ ಪರಾರ್ಜಿತ ಅಭ್ಯರ್ಥಿಗಳಿಗೂ ಸನ್ಮಾನ ನಡೆಸಲಾಗುವುದು ಎಂದರು.
ಬಿಜೆಪಿ ಬೆಂಬಲಿಸುವಂತೆ ಕೋರಿಕೆ
ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಾಲಿಕೆಯಲ್ಲಿ ಯಾವ ರೀತಿ ಆಡಳಿತ ಮಾಡಿದೆ ಎನ್ನುವುದನ್ನು ಪಕ್ಷೇತರ ಮತ್ತು ಜೆಡಿಎಸ್ ಅಭ್ಯರ್ಥಿಗೆ ಮನವರಿಕೆ ಮಾಡಿ ಕೊಟ್ಟಿದ್ಧೇವೆ . ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯದಿಂದ ಬಿಜೆಪಿಗೆ ಬೆಂಬಲಿಸುವಂತೆ ಕೇಳಿಕೊಂಡಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಎಲ್.ಡಿ. ಗೋಣೆಪ್ಪ, ರಾಜನಹಳ್ಳಿ ಶಿವಕುಮಾರ್, ಶಾಂತಕುಮಾರ ಸೋಗಿ, ರಾಕೇಶ್ ಜಾಧವ್ , ಗಾಯತ್ರಿ ಬಾಯಿ, ಗುರುರಾಜ್ ಸೋಗಿ ಗೌತಮ್ ಜೈನ್, ಶ್ರೀನಿವಾಸ್, ಎಸ್.ಟಿ. ವೀರೇಶ್ ಉಪಸ್ಥಿತರಿದ್ದರು.



