ಡಿವಿಜಿ ಸುದ್ದಿ, ದಾವಣಗೆರೆ: ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ಪೌರತ್ವ ನೋಂದಣಿ (ಎನ್ ಆರ್ ಸಿ) ಹಿಂಪಡೆಯಬೇಕು ಎಂದು ಆಗ್ರಹಿಸಿ ಡಿ. 28 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡ ಅಮಾನುಲ್ಲಾ ಖಾನ್, ಸಮಾವೇಶದಲ್ಲಿ ರಾಜ್ಯದ ಪ್ರಮುಖ ನಾಯಕರು, ಪ್ರಗತಿಪರ ಚಿಂತಕರು,ಸಾಮಾಜಿಕ ಹೋರಾಟಗಾರರು, ಸಂಘ,ಸಂಸ್ಥೆಯ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಅದೇ ರೀತಿ ಈ ಸಮಾವೇಶ ಬೆಂಬಲಿಸುವರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಎನ್ಆರ್ ಸಿ ಮತ್ತು ಸಿಎಎ ಜನವಿರೋಧಿಯಾಗಿದ್ದು, ಈ ಕಾನೂನುನನ್ನು ಕೇಂದ್ರ ಸರ್ಕಾದ ಹಿಂಪಡೆಯಬೇಕು. ಈ ಸಮಾವೇಶದ ಮೂಲಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ಪ್ರತಿಭಟನೆ ಶಾಂತಿಯುತವಾಗಿ ನಡೆಯಲಿದ್ದು, ಕಾಯ್ದೆ ಹಿಂಪಡೆಯುವರೆಗೂ ಹೋರಾಟ ಮಾಡುತ್ತೇವೆ. ಎಂಎಲ್ ಸಿ ಅಬ್ದುಲ್ ಜಬ್ಬಾರ್, ಸಮಾಜ ಮುಖಂಡ ಸಾಧಿಕ್ ಪೈಲ್ವಾನ್, ಸೈಯದ್ ಸೈಫುಲ್ಲಾ ಅವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ ಎಂದರು.



