Connect with us

Dvgsuddi Kannada | online news portal | Kannada news online

ಸಿಎಎ, ಎನ್ ಸಿಆರ್  ಹಿಂಪಡೆಯಲು ಆಗ್ರಹಿಸಿ ಬೃಹತ್ ಸಮಾವೇಶ

ದಾವಣಗೆರೆ

ಸಿಎಎ, ಎನ್ ಸಿಆರ್  ಹಿಂಪಡೆಯಲು ಆಗ್ರಹಿಸಿ ಬೃಹತ್ ಸಮಾವೇಶ

ಡಿವಿಜಿ ಸುದ್ದಿ, ದಾವಣಗೆರೆ: ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ  ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ಪೌರತ್ವ ನೋಂದಣಿ (ಎನ್ ಆರ್ ಸಿ) ಹಿಂಪಡೆಯಬೇಕು ಎಂದು ಆಗ್ರಹಿಸಿ ಡಿ. 28 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡ ಅಮಾನುಲ್ಲಾ ಖಾನ್, ಸಮಾವೇಶದಲ್ಲಿ ರಾಜ್ಯದ ಪ್ರಮುಖ ನಾಯಕರು, ಪ್ರಗತಿಪರ ಚಿಂತಕರು,ಸಾಮಾಜಿಕ ಹೋರಾಟಗಾರರು, ಸಂಘ,ಸಂಸ್ಥೆಯ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಅದೇ ರೀತಿ ಈ ಸಮಾವೇಶ ಬೆಂಬಲಿಸುವರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಎನ್ಆರ್ ಸಿ ಮತ್ತು ಸಿಎಎ ಜನವಿರೋಧಿಯಾಗಿದ್ದು, ಈ ಕಾನೂನುನನ್ನು ಕೇಂದ್ರ ಸರ್ಕಾದ ಹಿಂಪಡೆಯಬೇಕು. ಈ ಸಮಾವೇಶದ ಮೂಲಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ಪ್ರತಿಭಟನೆ ಶಾಂತಿಯುತವಾಗಿ ನಡೆಯಲಿದ್ದು, ಕಾಯ್ದೆ ಹಿಂಪಡೆಯುವರೆಗೂ ಹೋರಾಟ ಮಾಡುತ್ತೇವೆ. ಎಂಎಲ್ ಸಿ ಅಬ್ದುಲ್ ಜಬ್ಬಾರ್, ಸಮಾಜ ಮುಖಂಡ ಸಾಧಿಕ್ ಪೈಲ್ವಾನ್, ಸೈಯದ್ ಸೈಫುಲ್ಲಾ ಅವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top