ಡಿವಿಜಿ ಸುದ್ದಿ, ದಾವಣಗೆರೆ: ತಾಲ್ಲೂಕಿನ ದ್ಯಾಮವ್ವನಹಳ್ಳಿಯಲ್ಲಿ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜುನಪ್ಪ ಅವರಿಗೆ ಗುರುವಂದನೆ ಹಾಗೂ ಸಿಸಿ ರಸ್ತೆ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯ ಕೆಲ್ಲೇಶಪ್ಪ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ಲಿಂಗರಾಜ್ ,ಮಂಜನಗೌಡ್ರು, ಕೊಟ್ರಬಸಪ್ಪ, ರಂಗಪ್ಪ, ಬಸವರಾಜಯ್ಯ, ಬಸಪ್ಪ, ವೀರಭದ್ರಪ್ಪ, ಪಿಡಿಒ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




