ಡಿವಿಜಿ ಸುದ್ದಿ, ದಾವಣಗೆರೆ: ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ ಅವರು ಇಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 6.30 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಹೊರಟು, ಚಿತ್ರದುರ್ಗ ಶಾಸಕರಾದ ತಿಪ್ಪಾರೆಡ್ಡಿ ಅವರ ನಿವಾಸ, ಮುರುಘಾ ಮಠ ಹಾಗೂ ಚಿತ್ರದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ, 12.30 ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ.
ನಂತರ ದಾವಣಗೆರೆಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡುವರು. ಮಧ್ಯಾಹ್ನ 2.30 ಗಂಟೆಗೆ ಡಿಸಿಸಿ ಬ್ಯಾಂಕ್‍ಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ನಂತರ 3.30 ಗಂಟೆಗೆ ದಾವಣಗೆರೆಯಿಂದ ರಸ್ತೆ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.



