ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ಬಡವರು, ಕೂಲಿ ಕಾರ್ಮಿಕರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಸಂಕಷ್ಟದಲ್ಲಿವರಿಗೆ ಬಿಜೆಪಿ ಪಕ್ಷದ ವತಿಯಿಂದ ಆಹಾರ ಕಿಟ್ ನೀಡಲಾಯಿತು.
ನಗರದ ಹೊಂಡದ ಸರ್ಕಲ್ ಬಳಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜನರಿಗೆ ಸಂಸದ ಜಿ.ಎಂ ಸಿದ್ದೇಶ್ವರ್ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಪ್ರೊ. ಲಿಂಗಣ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್, ಪಾಲಿಕೆ ಸದಸ್ಯರಾದ ವೀರೇಶ್, ರಾಕೇಶ್, ಶಿವನಗೌಡ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.