ಡಿವಿಜಿ ಸುದ್ದಿ, ದಾವಣಗೆರೆ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಸಲೀಂ ಅಹ್ಮದ್, ಈಶ್ವರ್ ಬಿ. ಖಂಡ್ರೆ, ಸತೀಶ್ ಜಾರಕಿಹೊಳಿ ಅವರು ಜು. 02 ರಂದು ಬೆಳಗ್ಗೆ ೧೧:೦೦ ಗಂಟೆಗೆ ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ನೂತನ ಕಾಂಗ್ರೆಸ್ ಭವನದಲ್ಲಿ ಪದಗ್ರಹಣ ಮಾಡಲಿದ್ದಾರೆಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಂಗಳೂರಿನಲ್ಲಿ ನಡೆಯಲಿರುವ ಪ್ರಧಾನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರುಗಳಾದ ಸಿದ್ದರಾಮಯ್ಯ, ಎಸ್‌ಆರ್ ಪಾಟೀಲ್ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಖರ್ಗೆ , ಕೆ.ಸಿ. ವೇಣುಗೋಪಾಲ್, ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಈಶ್ವರ್ ಬಿ. ಖಂಡ್ರೆ, ಡಾ. ಶಾಮನೂರು ಶಿವಶಂಕರಪ್ಪ, ಕೆ.ಹೆಚ್. ಮುನಿಯಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಹೆಚ್. ಆಂಜನೇಯ, ಡಾ. ಜಿ. ಪರಮೇಶ್ವರ್, ಆರ್.ವಿ. ದೇಶಪಾಂಡೆ ಸೇರಿದಂತೆ ಶಾಸಕರು ಮಾಜಿ ಸಚಿವರು ಸೇರಿದಂತೆ ರಾಜ್ಯ ಮತ್ತು ರಾಷ್ಟದ ೧೫೦ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಕರ್ನಾಟಕ ರಾಜ್ಯಾದ್ಯಂತ 7831 ಕ್ಕೂ ಅಧಿಕ ಸ್ಥಳಗಳಲ್ಲಿ ಜೂಮ್ ಮುಖಾಂತರ ಕಾರ್ಯಕ್ರಮದ ನೇರ ವೀಕ್ಷಣೆ ಹಾಗೂ ಸಂವಿಧಾನ ಪೀಠಿಕೆ ಓದುವುದು ಪ್ರತಿಜ್ಞೆ ಕೈಗೊಳ್ಳುವುದು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುವುದಾಗಿ ಪ್ರತಿಜ್ಞೆ ಕೈಗೊಳ್ಳುವುದು. ರಾಜ್ಯದ ಹತ್ತು ಲಕ್ಷಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗುವರು. ಕಾಂಗ್ರೆಸ್ ಪಕ್ಷಕ್ಕೆ ಪದಗ್ರಹಣ ಕಾರ್ಯಕ್ರಮ ಹೊಸ ಶಕ್ತಿ, ಹೊಸ ಚೈತನ್ಯ ನೀಡಲಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯದ 30 ಜಿಲ್ಲಾ ಪಂಚಾಯಿತಿ, 176 ತಾಲ್ಲೂಕು ಪಂಚಾಯಿತಿ 6021 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ 8 ಕಾರ್ಪೋರೇಷನ್ 243 ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಕರೋನಾ ವೈರಸ್ ಸಂಕಷ್ಟದ ಸಮಯವಾದ್ದರಿಂದ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ಯಾನಿಟೈಸರ್, ಕಡ್ಡಾಯವಾಗಿ ಪ್ರತಿಯೊಬ್ಬರಿಗೂ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದವರು 7676366666 ಈ ನಂಬರ್‌ಗೆ ಮಿಸ್‌ಡ್ ಕಾಲ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿ ವಿನಂತಿಸುತ್ತೇವೆ. ಮಹಾನಗರ ಪಾಲಿಕೆ ಹಿರಿಯ ಸದಸ್ಯರಾದ ಕೆ. ಚಮನ್ , ಗಡಿಗೂಡಾಳ್ ಮಂಜುನಾಥ್ , ಕೆಪಿಸಿಸಿ ವೀಕ್ಷಕ ಅಲ್ಲಾವಲ್ಲಿ ಘಾಜಿಖಾನ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್. ಹರೀಶ್ ಬಸಾಪುರ, ಕಾಂಗ್ರೆಸ್ ಮುಖಂಡ ಕೆ.ಎಂ. ಮಂಜುನಾಥ್, ಬಿ.ಹೆಚ್. ಉದಯ್‌ಕುಮಾರ್, ಎಂ.ಕೆ ಲಿಯಾಕತ್ ಅಲಿ. ಡಿ. ಶಿವಕುಮಾರ್, ಕೆ.ಸಿ. ಜುಬೇರ್ ಇತರರು ಹಾಜರಿದ್ದರು.



