ಡಿವಿಜಿ ಸುದ್ದಿ, ದಾವಣಗೆರೆ: ಕಾರೋನ ವೈರಸ್ ನಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಜನತೆಗೆ ಅಗತ್ಯ ಸೌಲಭ್ಯ ಹಾಗೂ ವೈದ್ಯಕೀಯ ನೆರವು ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ವಿಭಾಗ ಮಟ್ಟದ ಕಾರ್ಯಪಡೆ ( ಟಾಸ್ಕ್ ಫೋರ್ಸ್) ರಚನೆ ಮಾಡಿದ್ದು, ಈ ಸಮಿತಿಯ ಸಭೆಯು ಇಂದು ದಾವಣಗೆರರಯಲ್ಲಿ ನಡೆಯಲಿದೆ.
ನಗರದ ಶಾಮನೂರು ರಸ್ತೆಯಲ್ಲಿರುವ ಬಾಪೂಜಿ ಅತಿಥಿಗೃಹದಲ್ಲಿ ಸಂಜೆ 5 ಗಂಟೆಗೆ ಸಮಿತಿ ಅಧ್ಯಕ್ಷ ಮಾಜಿ ಸಚಿವ ಶ್ರೀ ಎಚ್. ಎಂ ರೇವಣ್ಣ ಅವರ ನೇತೃತ್ವದಲ್ಲಿ ನಡೆಯಲಿದ್ದು, ಸಮಿತಿ ಸದಸ್ಯರಾದ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಬಿ.ಎನ್. ಚಂದ್ರಪ್ಪ ಎಸ್. ಪಿ. ಮುದ್ದುಹನುಮೇಗೌಡ, ವಿ. ಮುನಿಯಪ್ಪ, ಶ್ರೀಮತಿ ರೂಪ ಶಶಿಧರ್ , ಶಾಸಕ ಎಸ್. ರಾಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ ಮಂಜಪ್ಪ ಜಿಲ್ಲೆಯ ಮಾಜಿ ಶಾಸಕರು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ ತಿಳಿಸಿದರು.



