ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿಂದು ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 121 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 4 ಸಾವು ಸಂಭವಿಸಿದ್ದು, ಜಿಲ್ಲೆಯಲ್ಲಿ ಇನ್ನು 38 ಸಕ್ರಿಯ ಪ್ರಕರಣಗಳು ಚಿಕಿತ್ಸೆ ಪಡೆಯುತ್ತಿವೆ. ಇಂದು 276 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು ಒಟ್ಟು 772 ನೆಗೆಟಿವ್ ಎಂದು ವರದಿ ಬಂದಿದೆ. ಇದುವರೆಗೆ ಒಟ್ಟು 8982 ಜನರ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು 8261 ನೆಗೆಟಿವ್ ಎಂದು ವರದಿ ಬಂದಿದೆ.
16 ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಪ್ರತಿ ದಿನ ಜ್ವರ/ಐಎಲ್‍ಐ/ಸಾರಿ ಸಮೀಕ್ಷೆ ನಡೆಸಲಾಗುತ್ತಿದೆ. 3 ದಿನಗಳಿಗೊಮ್ಮೆ ಬಫರ್ ಝೋನ್‍ನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ತೀವ್ರ ಉಸಿರಾಟದ ತೊಂದರೆಗೆ(ಎಸ್‍ಎಆರ್‍ಐ)ಸಂಬಂಧಿಸಿದಂತೆ ಇದುವರೆಗೆ 335 ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 3 ಪಾಸಿಟಿವ್ ಬಂದಿದ್ದು, 6 ರ ಫಲಿತಾಂಶ ನಿರೀಕ್ಷೆಯಲ್ಲಿದೆ.

ಶೀತ, ಕೆಮ್ಮು, ಜ್ವರ (ಐಎಲ್‍ಐ)ಕ್ಕೆ ಸಂಬಂಧಿಸಿದಂತೆ 634 ಪರೀಕ್ಷೆ ನಡೆಸಲಾಗಿದ್ದು, 605 ನೆಗೆಟಿವ್ ಎಂದು ವರದಿ ಬಂದಿದ್ದು, 7 ಪಾಸಿಟಿವ್ ವರದಿ ಬಂದಿದೆ. ಇನ್ನು 22 ಜನರ ಫಲಿತಾಂಶ ನಿರೀಕ್ಷೆಯಲ್ಲಿದೆ.



